ರಾಷ್ಟ್ರೀಯ ಸೇವಾ ಯೋಜನೆ


ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್)
ಸಂಸ್ಥೆ ತನ್ನ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯನ್ನು ಗುರಿಯಾಗಿರಿಸಿಕೊಂಡಿದ್ದು, ನಿಟ್ಟಿನಲ್ಲಿ ಸಹಾಯ ಮಾಡುವ ಒಂದು ಚಟುವಟಿಕೆಯೇ ರಾಷ್ಟ್ರೀಯ ಸೇವಾ ಯೋಜನೆ. ಸಂಸ್ಥೆಯು ಯುವ ಶಕ್ತಿ ಮತ್ತು ಸಾಮರ್ಥ್ಯವನ್ನು ಸರಿಯಾದ ಮಾರ್ಗದಲ್ಲಿ ಬಳಸಿಕೊಳ್ಳುವ ಮೂಲಕ ಅವರಲ್ಲಿ ಸಮುದಾಯ ಸೇವೆಯ ಉತ್ಸಾಹವನ್ನು ಮೂಡಿಸುತ್ತಿದೆ. ಸಂಸ್ಥೆಯಲ್ಲಿನ ಎನ್ಎಸ್ಎಸ್, ಯುವಕ/ ಯುವತಿಯರನ್ನು ಅರ್ಥಪೂರ್ಣ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಗುರಿಯನ್ನು ಹೊಂದಿದ್ದು, ಇದು ಅಂತಿಮವಾಗಿ ಸಮಾಜದೊಂದಿಗೆ ಪರಿಣಾಮಕಾರಿಯಾಗಿ ಸಂಯೋಜಿಸಲು ಸಹಾಯ ಮಾಡುತ್ತದೆ.